Tuesday, October 20, 2026
Tuesday, October 20, 2026

ಶ್ರೀಕೃಷ್ಣ ಮಠಕ್ಕೆ ಬಿ.ಎಲ್.ಸಂತೋಷ್ ಭೇಟಿ

ಶ್ರೀಕೃಷ್ಣ ಮಠಕ್ಕೆ ಬಿ.ಎಲ್.ಸಂತೋಷ್ ಭೇಟಿ

Date:

ಉಡುಪಿ, ಏ.11: ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ್ ಶ್ರೀ ಕೃಷ್ಣ ದರ್ಶನ ಪಡೆದರು. ತದನಂತರ ಗೋಶಾಲೆಗೆ ತೆರಳಿ ಗೋ ಸೇವೆ ಮಾಡಿ ಗೀತಾಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕಾರ ಮಾಡಿದರು. ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷರವರ ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಶ್ರೀಕೃಷ್ಣಾನುಗ್ರಹವನ್ನು ಪ್ರದಾನ ಮಾಡಿದರು. ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷರವರು ಶ್ರೀಗಳಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಿದರು.

ಬಳಿಕ ಗೀತಾ ಮಂದಿರದಲ್ಲಿ ಭಾರತ್ ಮೇಳದ ಅಂಗವಾಗಿ ನಡೆಯುವ ವಿಶೇಷ ವಿಶ್ವರೂಪದ ಪ್ಲಾನಿಟೋರಿಯಂ ಪ್ರದರ್ಶನದ ಉದ್ಘಾಟನೆ ಬಿ ಎಲ್ ಸಂತೋಷ್ ಅವರಿಂದ ನಡೆಯಿತು. ಶ್ರೀಕೃಷ್ಣ ಮಹಿಮೆಯ ಸಂಕ್ಷಿಪ್ತ ಚಿತ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!