Friday, February 27, 2026
Friday, February 27, 2026

ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಏ.11: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!