Friday, February 27, 2026
Friday, February 27, 2026

ಸಾಲಿಗ್ರಾಮ ಪ. ಪಂ.: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ

ಸಾಲಿಗ್ರಾಮ ಪ. ಪಂ.: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ

Date:

ಉಡುಪಿ, ಏ.11: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಎಲ್ಲಾ ಉದ್ಯಮದಾರರ 2025-26 ನೇ ಸಾಲಿನ ಉದ್ಯಮ ಪರವಾನಿಗೆ ನವೀಕರಣ ಅವಧಿಯು ಏಪ್ರಿಲ್ 2025 ರ ಮಾಹೆಯಿಂದ ಪ್ರಾರಂಭವಾಗಲಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯಮ ನಡೆಸುತ್ತಿರುವ ಉದ್ಯಮದಾರರು ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ನಿಗಧಿತ ದಾಖಲೆ ಸಹಿತ ಆನ್‌ಲೈನ್ ತಂತ್ರಾಂಶದ ಮೂಲಕ ಅಥವಾ ಪಟ್ಟಣ ಪಂಚಾಯತ್‌ಗೆ ಅರ್ಜಿ ನಮೂನೆ ಸಹಿತ ನಿಗಧಿತ ದಾಖಲೆ ಸಲ್ಲಿಸಿ ಉದ್ಯಮ ಪರವಾನಿಗೆ ನವೀಕರಿಸಿಕೊಳ್ಳಬಹುದಾಗಿದೆ. ನಿಗದಿತ ಅವಧಿಯಲ್ಲಿ ಉದ್ಯಮ ಪರವಾನಿಗೆ ನವೀಕರಿಸದಿದ್ದಲ್ಲಿ ಅಧಿಸೂಚನೆಯಂತೆ ನಿಗಧಿತ ದಂಡಸಹಿತದೊಂದಿಗೆ ಬಾಕಿ್ ಶುಲ್ಕವನ್ನು ಪಾವತಿಸಬೇಕು. ಈಗಾಗಲೇ ಉದ್ಯಮ ಸ್ಥಗಿತಗೊಳಿಸಿದ್ದಲ್ಲಿ ಪಟ್ಟಣ ಪಂಚಾಯತ್‌ಗೆ ಲಿಖಿತವಾಗಿ ಅರ್ಜಿ ಸಲ್ಲಿಸಿ, ದಂಡನೆ ಸಹಿತ ಬಾಕಿ ಶುಲ್ಕ ಪಾವತಿಸಿ ಉದ್ಯಮ ಪರವಾನಿಗೆಯನ್ನು ರದ್ದುಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಸದ್ರಿ ಉದ್ಯಮದಾರರನ್ನು ಪ್ರತಿವರ್ಷ ಬಾಕಿದಾರರೆಂದು ಪರಿಗಣಿಸಿ ಕಾನೂನು ರೀತ್ಯಾ ದಂಡಸಹಿತ ಬಾಕಿ ಶುಲ್ಕ ವಸೂಲಿ ಮಾಡಲು ಕ್ರಮವಹಿಸಲಾಗುವುದು.

ಉದ್ಯಮ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಉದ್ಯಮ ನಡೆಸುತ್ತಿದ್ದಲ್ಲಿ ತಕ್ಷಣವೇ ನಿಗಧಿತ ದಾಖಲೆ ಸಹಿತ ಆನ್‌ಲೈನ್ ತಂತ್ರಾಂಶದ ಮೂಲಕ ಅಥವಾ ಪಟ್ಟಣ ಪಂಚಾಯತ್ ಕಛೇರಿಗೆ ಲಿಖಿತವಾಗಿ ಅರ್ಜಿ ಸಲ್ಲಿಸಿ ನಿಗಧಿತ ದಾಖಲೆಯನ್ನು ನೀಡಿ ಉದ್ಯಮ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ಬೀದಿ ಬದಿ ವ್ಯಾಪಾರಸ್ಥರು, ಗೂಡಂಗಡಿದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿನ ವ್ಯಾಪಾರಸ್ಥರು ಉದ್ಯಮ ಪರವಾನಿಗೆ ಪಡೆಯದೇ ಉದ್ಯಮ ನಡೆಸುತ್ತಿದ್ದಲ್ಲಿ ಪಟ್ಟಣ ಪಂಚಾಯತ್ ಕಛೇರಿಗೆ ನಿಗಧಿತ ಘನತ್ಯಾಜ್ಯ ಹಾಗೂ ಉದ್ಯಮ ಶುಲ್ಕವನ್ನು ಪಾವತಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟಗಾರರು ನಿಗಧಿತ ಶುಲ್ಕ ಪಾವತಿಸಿಕೊಂಡು ಕಡ್ಡಾಯವಾಗಿ ಆನ್‌ಲೈನ್ ತಂತ್ರಾಂಶದ ಮೂಲಕ ತಂಬಾಕು ಪರವಾನಿಗೆ ಪಡೆಯುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!