Friday, February 27, 2026
Friday, February 27, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಭೇಟಿ

Date:

ಕಾಪು, ಏ.12: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಇವರು ಶನಿವಾಅರ ಸಪತ್ನಿಕರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ವಕೀಲರಾದ ಎಂ ಸುಧಾಕರ್ ಪೈ, ಕೇತನ್ ಬಂಗೇರ, ಅಭಿಷೇಕ್ ಮಾರ್ಲ, ಶ್ರೀನಿಧಿ ಹೆಗ್ಡೆಯವರೊಂದಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.

ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನ ಅತ್ಯದ್ಭುತವಾಗಿ ಮೂಡಿಬಂದಿದೆ, ಕಾಪು ಅಮ್ಮನಿಂದ ದೇಶದಲ್ಲಿ ಶಾಂತಿ ಸುಭಿಕ್ಷೆ ನೆಲೆಯಾಗಲಿ, ಎಲ್ಲರಿಗೂ ಮಾರಿಯಮ್ಮ ಅನುಗ್ರಹಿಸಲಿ ಎಂದರು.

ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯಾನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ್ ರಾವ್ ಕಲ್ಯಾ, ಚರಿತ ದೇವಾಡಿಗ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!