ಕೆಮ್ಮಣ್ಣು, ಏ.12: ಕೆಮ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಕಲ್ಯಾಣಪುರ ಹಾಗೂ ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಇವರ ಸಹಯೋಗದಲ್ಲಿ ಶಟಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಸತೀಶ್ ಶೆಟ್ಟಿ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ವಿಭಾಗ ಇವರು ವಹಿಸಿದ್ದರು. ಶಟಲ್ ಬ್ಯಾಡ್ಮಿಂಟನ್ ತರಬೇತುದಾರರಾದ ಸುರೇಶ್ ಬನ್ನಂಜೆ ಇವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಮಾಜಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಂದಕಿಶೋರ್ ಕೆಮ್ಮಣ್ಣು, ಲಯನ್ಸ್ ಕ್ಲಬ್ ಕಲ್ಯಾಣಪುರ ಅಧ್ಯಕ್ಷರಾದ ರೊನಾಲ್ಡ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷರಾದ ಹಿರಿಯ ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ, ಶಾಲಿನಿ ಶೆಟ್ಟಿ ಉಡುಪಿ ಅಥ್ಲೆಟಿಕ್ ಕೋಚ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ನ ಸದಸ್ಯರಾದ ದೀಪಕ್ ಕುಮಾರ್, ಶಾಲಾ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ನರಸಿಂಹಮೂರ್ತಿ, ಹಳೆ ವಿದ್ಯಾರ್ಥಿ ಬಾಲಕೃಷ್ಣ, ಯಾದವ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕಿ ಅನಿತಾ ಉಪಸ್ಥಿತರಿದ್ದರು. ಹೈಸ್ಕೂಲ್ ವಿಭಾಗದ ಮುಖ್ಯಸ್ಥೆ ವಂದನ ಸ್ವಾಗತಿಸಿ, ಇಂಗ್ಲಿಷ್ ಶಿಕ್ಷಕಿ ಗ್ರೇಸಿ ಬಾಂಜಿ ವಂದಿಸಿದರು. ಕನ್ನಡ ಭಾಷಾ ಶಿಕ್ಷಕಿ ಶಾಲಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.




By
ForthFocus™