Monday, October 5, 2026
Monday, October 5, 2026

ಗೋಪಾಲಪುರ: ಸ್ವಚ್ಛತೆ ಕೆಡಿಸುತ್ತಿರುವ ಕಿಡಿಗೇಡಿಗಳು

ಗೋಪಾಲಪುರ: ಸ್ವಚ್ಛತೆ ಕೆಡಿಸುತ್ತಿರುವ ಕಿಡಿಗೇಡಿಗಳು

Date:

ಉಡುಪಿ, ಏ.13: ಉಡುಪಿ ನಗರಸಭೆಯ ಗೋಪಾಲಪುರ ವಾರ್ಡ್ ನಲ್ಲಿ ಉಡುಪಿ ನಗರಸಭೆಯ ವತಿಯಿಂದ ದಿನನಿತ್ಯ ವ್ಯವಸ್ಥಿತವಾಗಿ ಹಸಿ ಕಸ, ಒಣ ಕಸ ಸಂಗ್ರಹಣೆ ಮತ್ತು ವಿಲೇವಾರಿ ನಡೆಯುತ್ತಿದೆ. ಆದರೂ ಪರಿಸರದ ಸೌಂದರ್ಯವನ್ನು ಕೆಲವು ಕಿಡಿಗೇಡಿಗಳು ನಿರಂತರವಾಗಿ ಕೆಡಿಸುತ್ತಿದ್ದಾರೆ. ಪ್ರತಿಯೊಂದು ಮನೆಯಿಂದ ನಗರಸಭೆಯ ವಾಹನಕ್ಕೆ ಕಸ ನೀಡುತ್ತಿದ್ದರೂ ಸುತ್ತಮುತ್ತಲಿನ ಕೆಲವರು ಗೋಪಾಲಪುರ ನಾಲ್ಕನೇ ಮುಖ್ಯರಸ್ತೆಯ ೨ನೇ ಅಡ್ಡರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯವನ್ನು ಸುರಿದು ಈ ಪ್ರದೇಶವನ್ನು ಡಂಪಿಂಗ್ ಯಾರ್ಡ್ ರೀತಿ ಮಾಡಿದ್ದಾರೆ. ಈ ಪರಿಸರದಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾಡುವ ಮೂಲಕ ಕಿಡಿಗೇಡಿಗಳನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!