Sunday, October 4, 2026
Sunday, October 4, 2026

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

Date:

ಕೋಟ, ಏ.13: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು, ಅಂದಿನಿಂದ ಇಲ್ಲಿಯವರೆಗೆ ಭೂಮಿಗೆ ಕಂಠಕವಾಗಿ ಪರಿಣಮಿಸಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಅಧಿಕಾರಿ ಮಲ್ತೇಶ್ ಅಳಲಗಿರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್ , ಜೆಸಿಐ. ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು.

ಪಂಚವರ್ಣ ಸಂಸ್ಥೆಗಳ ಹಾಗೆ ಸಂಘಟನೆಗಳು ಗಲ್ಲಿ ಗಲ್ಲಿಗಳಲ್ಲಿ ಹುಟ್ಟಿಕೊಳ್ಳಬೇಕು, ಆಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರು. ಉಡುಪಿ ವಲಯ ಅರಣ್ಯ ಇಲಖೆಯ ಅಧಿಕಾರಿಗಳಾದ ಉದಯ ಕುಮಾರ್, ರಮೇಶ್ ಕೋಟ, ಶ್ರೀನಿವಾಸ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭ ಕೆ ಹಂದಟ್ಟು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!