Saturday, January 17, 2026
Saturday, January 17, 2026

ಸಂತೆಕಟ್ಟೆ: ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮ

ಸಂತೆಕಟ್ಟೆ: ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮ

Date:

ಉಡುಪಿ, ಏ.14: ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ. ಮಣಿಪಾಲ ಹಾಗೂ ಕಸ್ತೂರ್ಬಾ ಆಸ್ಪತ್ರೆಯ ನ್ಯೂಟ್ರಿಷಿಯನ್ ವಿಭಾಗ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ನ ಒಬಿಜಿ ಮತ್ತು ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗ ಮತ್ತು ಮೌಂಟ್ ರೋಸರಿ ಚರ್ಚ್,ಕಲ್ಯಾಣಪುರ, ಸಂತೆಕಟ್ಟೆ, ಕ್ಯಾಥೋಲಿಕ್ ಸಭಾ ಮೌಂಟ್ ರೋಸರಿ, ಐಸಿವೈಎಂ ಮೌಂಟ್ ರೋಸರಿ, ರೋಟರಿ ಕ್ಲಬ್, ಕಲ್ಯಾಣಪುರ ಇವರ ಸಹಯೋಗದೊಂದಿಗೆ ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ಆರೋಗ್ಯ ತಪಾಸಣೆ ಹಾಗೂ ಯುವಜನತೆಯಲ್ಲಿ ಕ್ಯಾನ್ಸರ್ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮವು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಹಾಗೂ ಕೆ.ಎಂ.ಸಿ.ಯ ಸಮುದಾಯ ಆಂಕಾಲಜಿ ಕೇಂದ್ರದ ಸಂಯೋಜಕರು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕರಾದ ಡಾ. ರಂಜಿತಾ ಎಸ್. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೌಂಟ್ ರೋಸರಿ ಚರ್ಚ್ ನ ಪ್ಯಾರಿಷ್ ಧರ್ಮಗುರುಗಳು ವಹಿಸಿದ್ದರು.
ಸಭೆಯಲ್ಲಿ ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಖಿಲಾ ಡಿ. ಅವರು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಕುರಿತು ಮಾಹಿತಿ ನೀಡಿದರು ಹಾಗೂ ವಿವಿಧ ವಿಷಯಗಳ ಕುರಿತು ಡಾ.ಸುವರ್ಣ ಹೆಬ್ಬಾರ್, ಸ್ವೀಟಿ ಫೆರ್ನಾಂಡಿಸ್, ಡಾ. ಮೆಲಿಟಾ ಸೆಲಿನಿ ಮಾಹಿತಿ ನೀಡಿದರು. ಕಾರ್ಯಕ್ರಮ ಆಯೋಜಕರು ಹಾಗೂ ಕೆ.ಎಂ.ಸಿ. ಮಣಿಪಾಲದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 70 ಜನರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!