Thursday, January 23, 2025
Thursday, January 23, 2025

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ

Date:

ಉಡುಪಿ: ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ.

ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ.

ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!