Friday, May 15, 2026
Friday, May 15, 2026

ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ

ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ

Date:

ಉಡುಪಿ, ಏ.17: ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಯಕ್ಷ ರಂಗಾಯಣದ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನಕ್ಕೆ ಹೊಸ ಪೀಳಿಗೆಯನ್ನು ತಯಾರು ಮಾಡುವುದರ ಜೊತೆಯಲ್ಲಿ ಯಕ್ಷಗಾನದ ವಿವಿಧ ರೀತಿಯ ಆಯಾಮಗಳಿಗೆ ಹೊಸ ಸ್ಪರ್ಶವನ್ನು ನೀಡುವ ಕಾರ್ಯವು ರಂಗಾಯಣದ ಮೂಲಕ ಇನ್ನಷ್ಟು ನಡೆಯಬೇಕು ಎಂದರು.

ಖ್ಯಾತ ಅರ್ಕಿಟೆಕ್ಟ್ ಪ್ರಮಲ್ ಕುಮಾರ್ ಮಾತನಾಡಿ, ಯುವಪೀಳಿಗೆಯು ದೊರೆತ ಅವಕಾಶಗಳ ಸದುಪಯೋಗ ಪಡೆದುಕೊಂಡು ಬದುಕಿನಲ್ಲಿ ಏಳಿಗೆಯನ್ನು ಹೊಂದುವುದರೊಂದಿಗೆ ದೇಶವನ್ನು ಕಟ್ಟುವಂತಹ ಭವ್ಯವಾದ ಕನಸುಗಳು, ಯೋಜನೆಗಳು ಯುವ ಮನಸ್ಸುಗಳಲ್ಲಿ ಮೂಡಿಬರಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ, ಶೈಕ್ಷಣಿಕೆ ಚಟುವಟಿಕೆಯ ಹೊರತಾಗಿ ಚಿತ್ರಕಲೆ, ಸಾಹಿತ್ಯ, ಸಂಗೀತ ಹಾಗೂ ಇನ್ನೀತರ ಸಾಂಸ್ಕೃತಿಕ ಚಟುವಟಿಕೆಯ ಭಾಗವಹಿಸುವಿಕೆಯಲ್ಲಿ ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವಸಂತ್ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!