ಕಾಪು, ಏ.19: ಕರ್ನಾಟಕ ಹೈಕೋರ್ಟ್ ನ ಜಸ್ಟಿಸ್ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ, ಉಚ್ಚಂಗಿ ದೇವಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ದೇವಳದ ಜೀರ್ಣೋದ್ಧಾರ ಮತ್ತು ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವದ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗಿಶ್ ವಿ. ಶೆಟ್ಟಿ ಮಾಹಿತಿಯನ್ನು ನೀಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕ ರಮೇಶ್ ಶೆಟ್ಟಿ ಕಾಪು ಕೊಲ್ಯ, ವಕೀಲರಾದ ಶೋಭಿತ್ ಶೆಟ್ಟಿ ಬೆಂಗಳೂರು ಮತ್ತು ಉಮೇಶ್ ಶೆಟ್ಟಿ ಕಳತ್ತೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್.ಪಾಲನ್, ಶೇಖರ ಸಾಲ್ಯಾನ್, ಚರಿತ ದೇವಾಡಿಗ, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೈಕೋರ್ಟ್ ನ ಜಸ್ಟಿಸ್ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಭೇಟಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೈಕೋರ್ಟ್ ನ ಜಸ್ಟಿಸ್ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಭೇಟಿ
Date:




By
ForthFocus™