Friday, November 20, 2026
Friday, November 20, 2026

ಕಷ್ಟಗಳನ್ನು ಎದುರಿಸಿ ಸಾಧಿಸಿ ತೋರಿಸುವುದೇ ನಿಜವಾದ ಗೆಲುವು

ಕಷ್ಟಗಳನ್ನು ಎದುರಿಸಿ ಸಾಧಿಸಿ ತೋರಿಸುವುದೇ ನಿಜವಾದ ಗೆಲುವು

Date:

ಕುಂದಾಪುರ, ಏ.19: ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ವಹಿಸಿದ್ದರು. ಮುಖ್ಯ ಅತಿಥಿ ಕುಂದಾಪುರ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಆದರ್ಶ ಹೆಬ್ಬಾರ್ ಅವರು ಮಾತನಾಡಿ ಎಲ್ಲಾ ಅನುಕೂಲಗಳ ಜೊತೆ ಜೊತೆಗೆ ಸಾಧನೆಗೈಯುವುದಕ್ಕಿಂತ ಬಡತನವನ್ನು ಮೆಟ್ಟಿನಿಂತು ಕಷ್ಟಗಳನ್ನು ಎದುರಿಸಿ ಸಾಧಿಸಿ ತೋರಿಸುವುದೇ ನಿಜವಾದ ಗೆಲುವು ಎಂದು ಹೇಳಿ ಸಂಘದ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿದರು. ಉಡುಪಿ ನಗರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಜಯಕರ್ ಐರೋಡಿ ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕೆ ವಿನಾಯಕ ಪೈ ಶುಭ ಹಾರೈಸಿದರು. ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿ ಪಿ ಶೇಷು, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ರಾಜು ಎನ್ ಮಾಸ್ತರ್ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರ ಹಿಮೇಶ್ ಇವರನ್ನು ಸನ್ಮಾನಿಸಲಾಯಿತು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಗದು ಪ್ರೋತ್ಸಾಹಕ ಬಹುಮಾನಗಳನ್ನು ವಿತರಿಸಲಾಯಿತು. 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಒಂಬತ್ತನೇ ರಾಂಕ್ ಪಡೆದ ನೆಹ ಎಸ್ ಕೊಡೇರಿ ಅವರಿಗೆ ದಾನಿಗಳು ಕೂಡ ಮಾಡಿದ 5000 ನಗದು ಬಹುಮಾನವನ್ನು ನೀಡಲಾಯಿತು. ಯುವತಿ ಮಂಡಲದ ಅಧ್ಯಕ್ಷೆ ಸಹನಾ ಕೆ ಮತ್ತು ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್‌. ಜಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಯುವತಿ ಮಂಡಲದ ಕಾರ್ಯದರ್ಶಿ ಸರಸ್ವತಿ ವರದಿ ವಾಚಿಸಿದರು. ರಿತೇಶ ಮತ್ತು ಸುಲೋಚನ ಬಹುಮಾನಿತರ ಪಟ್ಟಿ ವಾಚಿಸಿದರು. ಯುವಕ ಮಂಡಲದ ಕಾರ್ಯದರ್ಶಿ ರಂಜಿತ ವಂದಿಸಿದರು ಸಭಾ ಕಾರ್ಯಕ್ರಮದ ಬಳಿಕ ಕಲಾ ಕುಂಭ ಕುಳಾಯಿ, ಮಂಗಳೂರು ಇವರಿಂದ ಪರಮಾತ್ಮ ಪಂಜುರ್ಲಿ ನಾಟಕ ಪ್ರದರ್ಶನ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!