Tuesday, January 21, 2025
Tuesday, January 21, 2025

ಸಾಂಪ್ರದಾಯಿಕ ಕಂಬಳ: ಸರ್ಕಾರದ ಅನುದಾನಕ್ಕೆ ಆಗ್ರಹ

ಸಾಂಪ್ರದಾಯಿಕ ಕಂಬಳ: ಸರ್ಕಾರದ ಅನುದಾನಕ್ಕೆ ಆಗ್ರಹ

Date:

ಬ್ರಹ್ಮಾವರ: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕಂಬಳ‌ ನಡೆಸಲು ರೂ 2 ಲಕ್ಷಕ್ಕೂ ಅಧಿಕ ವೆಚ್ಚವಾಗುತ್ತಿರುವುದರಿಂದ ಸರ್ಕಾರ ಕನಿಷ್ಟ ಒಂದು ಲಕ್ಷ ಅನುದಾನ‌ ನೀಡುವಂತೆ ಜಿಲ್ಲೆಯ ಸಚಿವರು, ಶಾಸಕರು ಸರ್ಕಾರವನ್ನು ಒತ್ತಾಯಿಸಲು ಪ್ರಯತ್ನಿಸಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸುಧಾಕರ ಹೆಗ್ಡೆ ಹೇಳಿದರು.

ಜಾಹೀರಾತು

ಬ್ರಹ್ಮಾವರದಲ್ಲಿ ಶನಿವಾರ ಸಾಂಪ್ರದಾಯಿಕ ಜಿಲ್ಲಾ ಕಂಬಳ ಸಮಿತಿ ಉಡುಪಿ ಜಿಲ್ಲೆಯಲ್ಲಿ 2021-22 ಸಾಲಿನ ಸಾಂಪ್ರದಾಯಿಕ ಕಂಬಳವನ್ನು ಸರ್ಕಾರದ ನಿಯಮಾನುಸಾರ ಕ್ರಮಬದ್ಧವಾಗಿ ಕಂಬಳವನ್ನು ನಡೆಸುವ ಹಾಗೂ ಸರ್ಕಾರದಿಂದ ಸಿಗುವ ಅನುದಾನದ ಕುರಿತು ಚರ್ಚಿಸಲು ಕಂಬಳದ ಮನೆಯವರು ಹಾಗೂ ಕೋಣಗಳ ಮಾಲೀಕರ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು

ಸಭೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಸಾಂಪ್ರದಾಯಿಕ ಕಂಬಳಗಳನ್ನು ನಡೆಸುವ ದಿನಾಂಕಗಳನ್ನು ಕಂಬಳ ಕೋಣದ ಮಾಲೀಕರ ಅನುಕೂಲಕ್ಕೆ ತಕ್ಕಂತೆ ನಿಗದಿಪಡಿಸಲು, ಪ್ರತಿ ತಾಲ್ಲೂಕಿನಲ್ಲಿ ಕಂಬಳ‌ ಸಮಿತಿಯ ಬಲವರ್ಧನೆ, ಕೋಣಗಳ‌ ಮಾಲೀಕರ ಒಗ್ಗೂಡುವಿಕೆಗೆ ಪ್ರಯತ್ನಿಸುವ ಬಗ್ಗೆ ಚರ್ಚಿಸಲಾಯಿತು.

ಜಾಹೀರಾತು

ಈ ಸಂದರ್ಭ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ ಹೆಗ್ಡೆ, ಕಾರ್ಯದರ್ಶಿ ಪ್ರಮೋದ್ ಶೆಟ್ಟಿ ಹೆರಂಜೆ, ಸಂಘಟನಾ ಕಾರ್ಯದರ್ಶಿ ಪ್ರಥ್ವಿರಾಜ ಶೆಟ್ಟಿ ಬಿಲ್ಲಾಡಿ, ಕರುಣಾಕರ ಶೆಟ್ಟಿ ಹಂದಾಡಿ, ಬೈಂದೂರಿನ‌ ವೆಂಕಟ ಪೂಜಾರಿ ಸಸಿಹಿತ್ಲು, ಸುರೇಶ್ ಕಾಂಡಿತಾರ್ ಬೈಂದೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!