Monday, September 28, 2026
Monday, September 28, 2026

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ: ಪರ್ಯಾಯ ಸಂಚಾರ ವ್ಯವಸ್ಥೆ

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ: ಪರ್ಯಾಯ ಸಂಚಾರ ವ್ಯವಸ್ಥೆ

Date:

ಉಡುಪಿ, ಏ.29: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವ ಕಾರ್ಯಕ್ರಮಗಳ ಪ್ರಯುಕ್ತ ಮೇ 2 ರಂದು ಸಂಜೆ 4 ಗಂಟೆಯಿಂದ ಮೇ 3 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರ ನಿಷೇಧಿಸಿ, ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್-ಮೂರು ಮಾರ್ಗದಲ್ಲಿ ಸಂಚರಿಸುವ ಲಘು ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಅಂಚೆ ಕಚೇರಿ, ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸಬೇಕು. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!