Saturday, May 2, 2026
Saturday, May 2, 2026

ಕಲಾಯತನ: ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ನೀಡಿ ಆಮಂತ್ರಣ

ಕಲಾಯತನ: ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ನೀಡಿ ಆಮಂತ್ರಣ

Date:

ಮಲ್ಪೆ, ಮೇ 14: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ಮೇ 17 ರಂದು ನಡೆಯಲಿರುವ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಯಕ್ಷಗಾನ ವಿದ್ವಾಂಸರಾದ ಪ್ರೊ. ಎಂ.ಎಲ್ ಸಾಮಗ ರವರ ಮನೆಗೆ ತೆರಳಿ ವೀಳ್ಯದೊಂದಿಗೆ ಆಮಂತ್ರಣ ಪತ್ರ ನೀಡುವ ಸಂಪ್ರದಾಯದ ಕಾರ್ಯಕ್ರಮ ಮೇ.12 ರಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ.ಎಂ.ಎಲ್ ಸಾಮಗ, ಸಾಹಿತ್ಯ ಸಮ್ಮೇಳನ ಅಕ್ಷರ ಜಾತ್ರೆ ಮಾತ್ರವಲ್ಲದೆ, ಎಲ್ಲಾ ಸಾಹಿತಿಗಳ, ಕಲಾಸಕ್ತರ ಒಟ್ಟುಗೂಡುವಿಕೆಯಾಗಿದೆ. ಈ ಮೂಲಕ ಸಾಹಿತ್ಯ ಬೆಳವಣಿಗೆಗೆ ಪರೋಕ್ಷ ಕಾರಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪತ್ನಿ, ಕಲಾವಿದರಾದ ಪ್ರತಿಭಾ ಸಾಮಗ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಾಧು ಸಾಲಿಯಾನ್, ಹಿರಿಯರಾದ ಭುವನ ಪ್ರಸಾದ್ ಹೆಗ್ಡೆ, ಕೊಡವೂರು ದೇವಳದ ಆಡಳಿತ ಮಂಡಳಿ ಸದಸ್ಯ ವಾದಿರಾಜ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಶೆಣೈ, ವಿದ್ಯಾ ಶಾಮಸುಂದರ್, ಕಸಾಪ ಪದಾಧಿಕಾರಿಗಳಾದ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ಅನಿತಾ ಸಿಕ್ವೇರಾ, ವಸಂತ್, ರಾಜೇಶ್ ಭಟ್ ಪಣಿಯಾಡಿ, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಸಾಹಿತಿ ಡಾ.ಕಾತ್ಯಾಯನಿ ಕುಂಜಿಬೆಟ್ಟು, ಲಕ್ಮೀನಾರಾಯಣ ಉಪಾಧ್ಯ, ಸುಶಾಂತ್ ಕೆರೆಮಠ ಉಪಸ್ಥಿತರಿದ್ದರು. ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!