Thursday, April 30, 2026
Thursday, April 30, 2026

ಬಿಲ್ಲವರ ಹಿತರಕ್ಷಣಾ ವೇದಿಕೆ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಸಮಾರಂಭ

ಬಿಲ್ಲವರ ಹಿತರಕ್ಷಣಾ ವೇದಿಕೆ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಸಮಾರಂಭ

Date:

ಗಂಗೊಳ್ಳಿ, ಮೇ 19: ಪರಸ್ಪರ ಸಹಕಾರ ತತ್ವವನ್ನು ಕಾರ್ಯರೂಪಕ್ಕೆ ಇಳಿಸುವುದರ ಮೂಲಕ ಸಂಸ್ಥೆಗಳನ್ನು ಬಲಪಡಿಸಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಶ್ರೀ ಚಕ್ರಮ್ಮ ದೇವಸ್ಥಾನ ಟ್ರಸ್ಟ್ ಕೋಡಿಯ ಅಧ್ಯಕ್ಷರಾದ ಕೋಡಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ನಡೆದ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿಗಳಾದ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಪ್ರವೀಣ್ ಪೂಜಾರಿ ಶುಭ ಹಾರೈಸಿದರು. ಉದ್ಯಮಿ ಶಶಿಕಾಂತ್ ಗಂಗೊಳ್ಳಿ, ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಿ ಎ ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರಿಗೆ ನಮನಗಳನ್ನು ಸಲ್ಲಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಬಿಲ್ಲವ ಸಮುದಾಯದ ಅಪೇಕ್ಷಾ, ವೈಷ್ಣವಿ, ಸನ್ವಿತ, ಕೃತಿಕ ಮತ್ತು ಸೇಜಲ್ ಅವರನ್ನು ಸನ್ಮಾನಿಸಲಾಯಿತು. 110 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆನಂದ ಬಿಲ್ಲವ ಸ್ವಾಗತಿಸಿದರು. ದೀಕ್ಷಾ ಪೂಜಾರಿ ಪ್ರಾರ್ಥಿಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ನಿರೂಪಿಸಿದರು. ರಾಘವೇಂದ್ರ ಬಿಲ್ಲವ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ, ಏ.29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಕಾಪು, ಏ.29: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಪಡುಬಿದ್ರಿ ಶ್ರೀ...

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ...
error: Content is protected !!