ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 5 ಅಧಿಸೂಚಿತ ಸಂಸ್ಥೆಗಳಿಗೆ ಮರು ಪ್ರಕಟಣೆ ಮತ್ತು 10 ಹೊಸ ಅಧಿಸೂಚಿತ ಸಂಸ್ಥೆ ಹಾಗೂ ದೇವಸ್ಥಾನಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಹ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಧಿಸೂಚಿತ ಮರು ಪ್ರಕಟಣೆಯ ಪ್ರವರ್ಗ ಸಿ ಸಂಸ್ಥೆಗಳು: ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ (ಮಹಿಳಾ 1 ಸ್ಥಾನಕ್ಕೆ), ಕಾಪು ತಾಲೂಕು ಕಟಪಾಡಿ ಏಣಗುಡ್ಡೆ ಚೊಕ್ಕಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ (ಸಾಮಾನ್ಯ 1 ಸ್ಥಾನಕ್ಕೆ), ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ಮೂಡುಕೇರಿ ಶ್ರೀ ಸೋಮೇಶ್ವರ ದೇವಸ್ಥಾನ, ಬೈಂದೂರು ತಾಲೂಕು ಕಂಬದಕೋಣೆ ಶ್ರೀ ಕೊಕ್ಕೇಶ್ವರ ದೇವಸ್ಥಾನ ಹಾಗೂ ಹುಂತಿನಗೋಳಿ ಹೇರೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ.
ಹೊಸ ಅಧಿಸೂಚಿತ ಸಂಸ್ಥೆಗಳು: ಮಣಿಪುರ ಕೊಡಂಗಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮರ್ಣೆ ಶ್ರೀ ಮಹಾಲಿಂಗೇಶ್ವರ ಹಾಗೂ ಶ್ರೀ ಅಬ್ಬಗ ದಾರಗ ಭೂತ ದೇವಸ್ಥಾನ, ಶಿವಳ್ಳಿ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಬ್ರಹ್ಮಾವರ ತಾಲೂಕಿನ ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಚೌಳಿಕೇರಿ ಶ್ರೀ ಬೈರವ ಗಣಪತಿ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ತಾಲೂಕು ತಲ್ಲೂರು ಶ್ರೀ ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವಸ್ಥಾನ, ಬೈಂದೂರು ತಾಲೂಕು ಕನ್ಯಾನ ಶ್ರೀ ವಾಸುದೇವ ದೇವಸ್ಥಾನ, ಕಾರ್ಕಳ ತಾಲೂಕು ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಹೆಬ್ರಿ ತಾಲೂಕು ಮುದ್ರಾಡಿ ಆಲಿಗುಂಡಿ ಬ್ರಹ್ಮ ದೇವಸ್ಥಾನ.
ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.