ಉಪ್ಪೂರು, ಜೂ.9: ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು ರಜತ ಸಂಭ್ರಮದ ಪ್ರಯುಕ್ತ “ಮಳೆ ನೀರು ಕೊಯ್ಲು” ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯರರಾದ ಅಶ್ವಿನ್ ರೊಚ್, ಉಪ್ಪೂರು ವ್ಯ. ಸೆ. ಸ. ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರ, ಉಪ್ಪೂರು ಸರಕಾರಿ ಪ್ರೌಢ ಶಾಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ ಮೊಗವೀರ ಉಪಸ್ಥಿತರಿದ್ದರು. ಅತಿಥಿಗಳಿಗೆ ರಾಮಫಲ ಗಿಡವನ್ನು ಸ್ಮರಣಿಕೆಯಾಗಿ ನೀಡಲಾಯಿತು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ ಕುಮಾರ್ ಸ್ವಾಗತಿಸಿ, ಅಧ್ಯಕ್ಷರಾದ ಸಂದೀಪ್ ಶೆಟ್ಟಿ ವಂದಿಸಿದರು. ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಉಪ್ಪೂರು: ಮಳೆ ನೀರು ಕೊಯ್ಲುಉದ್ಘಾಟನೆ
ಉಪ್ಪೂರು: ಮಳೆ ನೀರು ಕೊಯ್ಲುಉದ್ಘಾಟನೆ
Date:




By
ForthFocus™