Tuesday, April 28, 2026
Tuesday, April 28, 2026

ಬಿಲ್ಲವ ಯುವ ವೇದಿಕೆ: ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ಬಿಲ್ಲವ ಯುವ ವೇದಿಕೆ: ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

Date:

ಕೋಟ, ಜೂ.9: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಭಾನುವಾರ ಪಾಂಡೇಶ್ವರ ಶಾಲೆಯಲ್ಲಿ ಜರುಗಿತು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅನ್ನಪೂರ್ಣ ಹಾಗೂ ಪೂರ್ವಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು. 205 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಉದ್ಯಮಿಗಳಾದ ದಯಾನಂದ ಪೂಜಾರಿ ಮೂಡಹಡು ಹಾಗೂ ಗೋಪಾಲ ಪೂಜಾರಿ ಮಠತೋಟ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ ವೆಂಕಟೇಶ್ ಪೂಜಾರಿ ಹಾಗೂ ಬಿಲ್ಲವ ಯುವ ವೇದಿಕೆ ಮಾಜಿ ಅಧ್ಯಕ್ಷ ರವಿ ಪೂಜಾರಿ ಕುದ್ರು ಭಾವಹಿಸಿದ್ದರು. ಸೀಮಾ ವಿಜಯ್ ಪೂಜಾರಿ ಸ್ವಾಗತಿಸಿ, ಉಷಾ ಗಣೇಶ್ ಪೂಜಾರಿ ವಂದಿಸಿದರು. ಕಾರ್ಯಕ್ರಮ ಸಂಯೋಜಕ ಸುರೇಶ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!