Tuesday, April 28, 2026
Tuesday, April 28, 2026

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

Date:

ಉಡುಪಿ, ಜೂ.9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು.

ದಿನಾಂಕ: 15.07.2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ನಿನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!