Sunday, April 26, 2026
Sunday, April 26, 2026

ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್.13: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್
http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.kmmd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!