Saturday, April 18, 2026
Saturday, April 18, 2026

ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Date:

ಉಡುಪಿ, ಜೂ.14: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೆತ್ತವರು ಮತ್ತು ಶಿಕ್ಷಕರು ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ. ಜಾಗತೀಕರಣದ ಸ್ಪಧಾ೯ತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸುವಲ್ಲಿ ಇಚ್ಛಾ ಶಕ್ತಿ, ಕೌಶಲಾ ಶಕ್ತಿ ಸಂವಹನ ಶಕ್ತಿ ವೃದ್ಧಿಸುವಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ ಎಂದು ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ಸಂವಿಧಾನದ ಆಶಯಗಳ ಕುರಿತಾಗಿ ಅರಿವು ಮೂಡಿಸುವುದು ಇಂದಿನ ಅನಿವಾರ್ಯತೆ ಎಂದು ಅವರು ಹೇಳಿದರು. ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕ ಕೆ.ಅಣ್ಣಪ್ಪ ಶೆಣೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಕೆ.ರತ್ನಾಕರ ಶೆಣೈ, ವಿದ್ಯಾ ಅಮರ ಪೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆತ್ರಾಡಿ ದಿನೇಶ್ ಹೆಗ್ಡೆ, ಉಪಾಧ್ಯಕ್ಷ ಶಶಿಧರ ಕುಂದರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೇೂಪಾಧ್ಯಾಯ ಕೆ.ವಿನಾಯಕ ಕಿಣಿ ಪ್ರತಿಜ್ಞಾ ವಿಧಿ ಬೇೂಧಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವ

ನವದೆಹಲಿ, ಏ.17: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಐತಿಹಾಸಿಕ ಥಾಣೆ ರೈಲ್ವೆ...

ಆಸ್ತಿ ತೆರಿಗೆ: ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಸೂಚನೆ

ಉಡುಪಿ, ಏ.17: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಾಸ, ವಾಣಿಜ್ಯ, ಕೈಗಾರಿಕೆ,...

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಏ.17: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ...

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

ಕೋಟ, ಏ.17: ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ...
error: Content is protected !!