
ಕಾಪು, ಜೂ.16: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹಾಗೂ ಮಾಜಿ ಸಚಿವ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಸಮಿತಿಯ ಪರವಾಗಿ ಗೌರವಿಸಿದರು.
ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್. ಪಾಲನ್ ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಜಯರಾಮ್ ಆಚಾರ್ಯ, ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.




By
ForthFocus™