Wednesday, November 18, 2026
Wednesday, November 18, 2026

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ, ಸಹಾಯಧನ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ, ಸಹಾಯಧನ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜೂ.16: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೇರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ತಂತ್ರಾಂಶದ ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜುಲೈ 4 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...

ಕಡೆಕಾರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ, ನ.18: ಕೆ.ಎಂ.ಸಿ. ಮಣಿಪಾಲದ ಕಣ್ಣಿನ ವಿಭಾಗ, ಆಪ್ಟೋಮಿಟ್ರಿ ವಿಭಾಗ ಹಾಗೂ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...
error: Content is protected !!