Wednesday, November 18, 2026
Wednesday, November 18, 2026

ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌: ‘ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ’ ಕಾರ್ಯಕ್ರಮ

ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌: ‘ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ’ ಕಾರ್ಯಕ್ರಮ

Date:

ಬ್ರಹ್ಮಾವರ, ಜೂ.17: ಇಲ್ಲಿನ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಮಕ್ಕಳಲ್ಲಿ ಕೃಷಿಯ ಕುರಿತು ಆಸಕ್ತಿಯನ್ನು ಮೂಡಿಸಲು ‘ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಉಡುಪಿ ಉದ್ಯಾವರದ ಕುತ್ಪಾಡಿಯ ಕೃಷಿ ಭೂಮಿಯಲ್ಲಿ ಭತ್ತದ ನಾಟಿಯನ್ನು ಮಾಡಿದರು. ಸಾಂಪ್ರದಾಯಿಕ ಶೈಲಿಯಲ್ಲಿ ಕಂಬಳದ ಕೋಣಗಳಿಂದ ಗದ್ದೆಯನ್ನು ಉಳುಮೆ ಮಾಡಿ ನಾಟಿಯನ್ನು ಪ್ರಾರಂಭಿಸಲಾಯಿತು. ಮಕ್ಕಳು ಸ್ಥಳೀಯ ರೈತರೊಂದಿಗೆ ನೇಜಿಯನ್ನು ನಾಟಿ ಮಾಡುವುದರ ಮೂಲಕ ಕೃಷಿಯ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ರೈತರನ್ನು ಸನ್ಮಾನಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕೃಷಿ ಭೂಮಿಯಲ್ಲಿ ಮಕ್ಕಳ ಜೊತೆಯಿದ್ದು ಸ್ಫೂರ್ತಿ ತುಂಬಿದರು. ಮಕ್ಕಳು ಮಧ್ಯಾಹ್ನ ಚಟ್ನಿಯ ಜೊತೆ ಗಂಜಿ ಊಟವನ್ನು ಮಾಡಿ ಹಳ್ಳಿಯ ಸೊಗಡನ್ನು ಅನುಭವಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!