Saturday, November 14, 2026
Saturday, November 14, 2026

ನೀಟ್ ಫಲಿತಾಂಶ: ರೊನಾಕ್ ಆರ್.ಶೆಟ್ಟಿ ಉಡುಪಿ ಜಿಲ್ಲೆಗೆ ಪ್ರಥಮ

ನೀಟ್ ಫಲಿತಾಂಶ: ರೊನಾಕ್ ಆರ್.ಶೆಟ್ಟಿ ಉಡುಪಿ ಜಿಲ್ಲೆಗೆ ಪ್ರಥಮ

Date:

ಉಡುಪಿ, ಜೂ.17: ಉಡುಪಿ ಎಂಜಿಎಂ. ಪದವಿಪೂರ್ವ ಕಾಲೇಜಿನ ರೊನಾಕ್ ಆರ್ ಶೆಟ್ಟಿಯವರು 2025ರ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 624/720 ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ 107 ನೇ ಸ್ಥಾನ, ರಾಜ್ಯ ಮಟ್ಟದಲ್ಲಿ 8 ನೇ ಸ್ಥಾನ ಅವಿಭಜಿತ ದ.ಕ.ಜಿಲ್ಲಾ ಮಟ್ಟದಲ್ಲಿ 3ನೇ ಸ್ಥಾನ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿದ್ದಾರೆ. ಇವರು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಸಹಾಯಕ ನಿರ್ದೇಶಕರಾದ ಡಾ.ರೇೂಷನ್ ಕುಮಾರ್ ಶೆಟ್ಟಿ ಮತ್ತು ಎಂ.ಜಿ.ಎಂ. ಕಾಲೇಜಿನ ಜೀವಶಾಸ್ತ್ರ ವಿಭಾಗ ಉಪನ್ಯಾಸಕಿ ಅನಿತಾ ಆರ್.ಶೆಟ್ಟಿ ದಂಪತಿ ಪುತ್ರ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಶಿಕ್ಷಕೇತರ ವರ್ಗದವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ...

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...
error: Content is protected !!