ಉಡುಪಿ, ಜೂ.19: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಜೂನ್ 19 ರಿಂದ 21 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ. 19 ರಂದು ರಾತ್ರಿ 9.45 ಕ್ಕೆ ಉಡುಪಿಗೆ ಆಗಮಿಸುವ ಅವರು, ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂ. 20 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ, 3 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೂ. 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ, 10 ಗಂಟೆಗೆ ಬೈಂದೂರು ತಹಶೀಲ್ದಾರರ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, 10.30 ಕ್ಕೆ ಬೈಂದೂರಿನ ರೋಟರಿ ಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಮತ್ತು ಬೈಂದೂರು ಹೋಬಳಿಯ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ, 11.15 ಕ್ಕೆ ಬೈಂದೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು, ಮಧ್ಯಾಹ್ನ 3 ಗಂಟೆಗೆ ಕಾಪು ತಹಶೀಲ್ದಾರರ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
Date:




By
ForthFocus™