Monday, January 20, 2025
Monday, January 20, 2025

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ- ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ- ಅರ್ಜಿ ಆಹ್ವಾನ

Date:

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ ಕಾರ್ಯಗಳ ವಿವಿಧ ಘಟಕಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಮೇ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!