Saturday, September 26, 2026
Saturday, September 26, 2026

ವಕೀಲರ ಸಂಘದಿಂದ ಉಡುಪಿ ಎಸ್.ಪಿ. ಭೇಟಿ

ವಕೀಲರ ಸಂಘದಿಂದ ಉಡುಪಿ ಎಸ್.ಪಿ. ಭೇಟಿ

Date:

ADVERTISEMENT
ADVERTISEMENT

ಉಡುಪಿ, ಜೂ.24: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಸೋಮವಾರ ಭೇಟಿಯಾಗಿ ಅಭಿನಂದಿಸಿತು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ರಾಜೇಶ್ ಎ.ಆರ್., ಬೈಲೂರು ರವೀಂದ್ರ ದೇವಾಡಿಗ, ಸಂತೋಷ್ ಮೂಡುಬೆಳ್ಳೆ, ಜಯಕೃಷ್ಣ ಆಳ್ವ ಮತ್ತು ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!