Sunday, September 6, 2026
Sunday, September 6, 2026

ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಸೂಚನೆ

ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ಜೂ.24: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಈ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ಜೂನ್ 30 ಕೊನೆಯ ದಿನವಾಗಿದೆ. ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್ ಮತ್ತು ಡಿಜಿಟಲ್ ಇ-ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. ಈ ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ವಿಮಾ ಘಟಕಗಳಾಗಿ ಅಧಿಸೂಚಿಸಲಾಗಿದ್ದು, ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದ್ದು, ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿದ್ದು, ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳದೇ ಇರಲು ಇಚ್ಚಿಸಿದಲ್ಲಿ ನೊಂದಣಿಯ ಅಂತಿಮ ದಿನಾಂಕದ ಒಂದು ವಾರದೊಳಗೆ ಮುಚ್ಚಳಿಕೆ ಪತ್ರವನ್ನು ಬೆಳೆ ಸಾಲ ಪಡೆದ ಹಣಕಾಸು ಸಂಸ್ಥೆಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!