Tuesday, October 27, 2026
Tuesday, October 27, 2026

ಕಲಿಕೋಪಕರಣ ವಿತರಣೆ

ಕಲಿಕೋಪಕರಣ ವಿತರಣೆ

Date:

ಕೋಟ, ಜೂ.24: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟ, ಇಲ್ಲಿ ಕಾಮಧೇನು ವಿವಿಧೋದ್ದೇಶ ಸಹಕಾರಿ ಸಂಘ ಹಂದಟ್ಟು ಇವರು ಕೊಡ ಮಾಡಿದ 2025-26ರ ಕಲಿಕೋಪಕರಣಗಳನ್ನು ಶಾಲೆಯಲ್ಲಿ ವಿತರಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕಿ ಕಮಲಾ ಮಯ್ಯ ಇವರು ಎಲ್ಲಾ ವಿದ್ಯಾರ್ಥಿಗಳಿಗೆ ನೀಡಿರುವ ಐಡಿ ಕಾರ್ಡ್, ಹೊಸದಾಗಿ ಸೇರಿರುವ ವಿದ್ಯಾರ್ಥಿಗಳಿಗೆ ವಕೀಲರಾದ ಮಹೇಶ್ ಹಂದಟ್ಟು ನೀಡಿರುವ ಬ್ಯಾಗ್, ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಉಪೇಂದ್ರ ಸೋಮಯಾಜಿ ಚಿತ್ರಪಾಡಿ ನೀಡಿರುವ ಒಂದು ಸಾವಿರ ಮೊತ್ತದ ನಿರಖು ಠೇವಣಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾಮಧೇನು ವಿವಿಧೋದ್ದೇಶ ಸಹಕಾರಿ ಸಂಘ ಹಂದಟ್ಟು ಕೋಟ ಸಂಸ್ಥೆಯ ಅಧ್ಯಕ್ಷೆ ಶಾಂತ ಭಟ್ ಪಾಂಡೇಶ್ವರ, ಸಂಸ್ಥೆಯ ಕಾನೂನು ಸಲಹೆಗಾರ ಮಂಜುನಾಥ್ ಎಸ್ ಕೆ., ಮುಖ್ಯ ಕಾರ್ಯನಿರ್ವಣಾಧಿಕಾರಿ ಸತೀಶ್ ಕೆ ನಾಯಕ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಂ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸವಿತಾ, ವಾಹನ ಸಮಿತಿಯ ಅಧ್ಯಕ್ಷ ಉಪೇಂದ್ರ ಸೋಮಯಾ. ಜಿ ಚಿತ್ರಪಾಡಿ, ಎಸ್‌ಡಿಎಂಸಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಯಾಜಿ, ಕಮಲಾ ಮಯ್ಯ, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಅನುಜ್ಞಾ ಕಾರ್ಯಕ್ರಮ ನಿರೂಪಿಸಿದರು. ಉನ್ನತಿ ವಿ ಹಂದಟ್ಟು ಸ್ವಾಗತಿಸಿ, ಸಾನ್ವಿ ವಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪುಷ್ಭಾವತಿ ಹೊಳ್ಳ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೊಂಟ ನೋವಿನಿಂದ ಬಳಲುವವರಿಗೆ ಉಚಿತ ಆಯುರ್ವೇದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮಣಿಪಾಲ, ಅ.27: ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ...

ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ

ಕುಂದಾಪುರ, ಅ.27: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿದ್ಯಾಸಂಸ್ಥೆಗಳ ಆವರಣ ಮಂದರ್ತಿಯಲ್ಲಿ ನಡೆದ...

ಸಿಎ ಇಂಟರ್ಮಿಡಿಯೇಟ್ ಫಲಿತಾಂಶ: ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಸೆಪ್ಟೆಂಬರ್...
error: Content is protected !!