Monday, October 26, 2026
Monday, October 26, 2026

ಯುವ ವಿಚಾರ ವೇದಿಕೆ: ರಜತ ಸಂಭ್ರಮ; ಆರೋಗ್ಯ ಮಾಹಿತಿ ಕಾರ್ಯಕ್ರಮ

ಯುವ ವಿಚಾರ ವೇದಿಕೆ: ರಜತ ಸಂಭ್ರಮ; ಆರೋಗ್ಯ ಮಾಹಿತಿ ಕಾರ್ಯಕ್ರಮ

Date:

ಉಪ್ಪೂರು, ಜೂ.26: ಯುವ ವಿಚಾರ ವೇದಿಕೆ ಕೊಳಲಗಿರಿ ಇದರ ರಜತ ಸಂಭ್ರಮದ 18ನೇ ಕಾರ್ಯಕ್ರಮ ಆರೋಗ್ಯ ಮಾಹಿತಿ ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಹೆಚ್ ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಾಪಾಡುವಲ್ಲಿ ಏನು ಮಾಡಬೇಕು ಹಾಗೂ ಮಲೇರಿಯಾ, ಡೆಂಗ್ಯೂ ಕಾಯಿಲೆ ರೋಗ ಲಕ್ಷಣ ಮತ್ತು ರೋಗ ಹರಡದಂತೆ ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಸಭಾಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಮಾಹಿತಿ ಪಡೆದುಕೊಂಡ ಉಪ್ಪೂರು ಪ್ರೌಢಶಾಲಾ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ನಡೆದ ಶಿಬಿರದ ಸಭಾ ವೇದಿಕೆಯಲ್ಲಿ ಯುವ ವಿಚಾರ ವೇದಿಕೆ ಜೊತೆ ಕಾರ್ಯದರ್ಶಿ ಶಕುಂತಲಾ ಸುಕೇಶ್, ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಕುಮಾರ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೊಳಲಗಿರಿ ಇಲ್ಲಿನ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಶಾಲಾ ಅಧ್ಯಾಪಕ ವೃಂದ, ನಿಕಟಪೂರ್ವ ಅಧ್ಯಕ್ಷ ದಿನೇಶ್ ಶೆಟ್ಟಿ, ವೇದಿಕೆ ಸದಸ್ಯರು ಉಪಸ್ಥಿತರಿದ್ದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!