Thursday, September 10, 2026
Thursday, September 10, 2026

ಜ್ಞಾನಕ್ಕಾಗಿ ಓದಿ: ಕೆ ರಾಜೇಂದ್ರ ಭಟ್

ಜ್ಞಾನಕ್ಕಾಗಿ ಓದಿ: ಕೆ ರಾಜೇಂದ್ರ ಭಟ್

Date:

ಕಾರ್ಕಳ, ಜೂ.28: ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಕೆ. ರಾಜೇಂದ್ರ ಭಟ್ ಹೇಳಿದರು.

ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು. ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ವಾಗ್ಮಿಗಳಾದ ಕೆ.ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡುತ್ತಾ ತಿಳಿಸಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ ಮಾಡುವುದೇ ಸ್ಮಾರ್ಟ್ ವರ್ಕ್. ಎಂದು ತಿಳಿಸುತ್ತಾ ಸುದೀರ್ಘವಾಗಿ ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹ ಸಂಸ್ಥಾಪಕರಾದ ಅಶ್ವತ್ ಎಲ್.  ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು, ನಿಲಯ ಪಾಲಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!