Monday, September 28, 2026
Monday, September 28, 2026

ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಂಸತ್ತು ಉದ್ಘಾಟನೆ

ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಂಸತ್ತು ಉದ್ಘಾಟನೆ

Date:

ಕೋಟ, ಜು.1: ಯುವ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆಯ ಅರಿವು ಮೂಡಿಸುವಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮಾದರಿ ಸಂಸದೀಯ ಕಾರ್ಯ ನಡವಳಿಕೆಯನ್ನು ಪ್ರಾಯೇೂಗಿಕವಾಗಿ ನಡೆಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಇಂದಿನ ಅಗತ್ಯತೆಯೂ ಹೌದು. ಪ್ರಜಾಪ್ರಭುತ್ವದಲ್ಲಿ ನಾಯಕತ್ವ ಗುಣ ಬೆಳೆಸುವುದು ಶಿಕ್ಷಣದ ಮೂಲ ಉದ್ದೇಶ. ನಾಯಕತ್ವದ ಪ್ರಮುಖ ಗುಣಗಳಾದ ನಮ್ರತೆ, ಸ್ವಷ್ಟತೆ, ಧೈರ್ಯ, ನಿರ್ಧಾರ ಮುಂತಾದ ಸಾಮರ್ಥ್ಯವನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕು ಎಂದು ರಾಜಕೀಯ ವಿಶ್ಲೇಷಕ ಎಂ.ಜಿ.ಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಕೇೂಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಅವರು ಮಾತನಾಡಿದರು. ಸಭಾಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯಸ್ಥೆ ಪ್ರೀತಿ ರೇಖಾ ವಹಿಸಿ ಪ್ರತಿಜ್ಞಾ ವಿಧಿ ಬೇೂಧಿಸಿದರು. ಶಾಲಾ ಸಂಸತ್ತು ಸದನದ ಸಭಾಪತಿ ಸಮೃದ್ಧಿ, ಉಪ ಸಭಾಪತಿ ಪ್ರಗತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಅಭಿಷೇಕ್ ಸ್ವಾಗತಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!