ಕೋಟ, ಜು.2: ಪರಿಸರದ ಮೇಲೆ ಮನುಕುಲ ನಿರಂತರ ದರ್ಪ ತೋರಿಸಿದ ದುಷ್ಪರಿಣಾಮ ಈಗಾಗಲೇ ನಾವುಗಳು ಅನುಭವಿಸುತ್ತಿದ್ದೇವೆ, ಈ ನಿಟ್ಟಿನಲ್ಲಿ ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಸೋಮವಾರ ಸರಕಾರಿ ಹಿ.ಪ್ರಾ. ಶಾಲೆ, ಕೋಟ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ.ಕೋಟ, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ, ಕೋಟ ಲಿಜನ್, ಜೆಸಿಐ ಕಲ್ಯಾಣಪುರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟ ಇದರ ಅಧ್ಯಕ್ಷ ಕೆ. ಕೊರಗ ಪೂಜಾರಿ ವಹಿಸಿ ಮಕ್ಕಳಿಗೆ ಗಿಡಗಳನ್ನು ಹಸ್ತಾಂತರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಯುನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಎಚ್ ಹೊಳ್ಳ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಚಿತ್ರ ಕುಮಾರ್, ಉಡುಪಿ ಟೆಂಪಲ್ ಸಿಟಿ ಲೀಜನ್ ಅಧ್ಯಕ್ಷ ಶಿವಾನಂದ ಶೆಟ್ಟಿಗಾರ್, ಜೇಸಿಐ ಕಲ್ಯಾಣಪುರ ಅಧ್ಯಕ್ಷೆ ಎವಿಟಾ ಡಿ’ಸೋಜ, ಜೂನಿಯರ್ ಜೇಸಿ ವಿಭಾಗದ ಅಧ್ಯಕ್ಷ ಆಸ್ಟೀನ್ ರಿಯೋನ್ಸ ವಾಜ್, ಜೆಸಿ ಸೀನಿಯರ್ ಚೇಂಬರ್ ಕೋಟ ಲೀಜನ್ ಅಧ್ಯಕ್ಷ ಕೇಶವ ಆಚಾರ್, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಜು ಪೂಜಾರಿ, ನಿರ್ದೇಶಕರಾದ ಮಂಜುನಾಥ ಪೂಜಾರಿ, ಕೃಷ್ಣ ಪೂಜಾರಿ ಪಿ., ಸಂಜೀವ ಪೂಜಾರಿ, ಭಾರತಿ ಎಸ್ ಪೂಜಾರಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ರಾಘವೇಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ಮಕ್ಕಳಿಗೆ ಪರಿಸರ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿ ಸ್ವಾಗತಿಸಿ ವಂದಿಸಿದರು.
ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಆಗಬೇಕಿದೆ: ರವೀಂದ್ರ ಕೋಟ
ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಆಗಬೇಕಿದೆ: ರವೀಂದ್ರ ಕೋಟ
Date:




By
ForthFocus™