Sunday, September 6, 2026
Sunday, September 6, 2026

ವೈದ್ಯರ ದಿನಾಚರಣೆ; ಅಭಿನಂದನಾ ಸಮಾರಂಭ

ವೈದ್ಯರ ದಿನಾಚರಣೆ; ಅಭಿನಂದನಾ ಸಮಾರಂಭ

Date:

ಉಡುಪಿ, ಜು.6: ಕರ್ನಾಟಕ ಸ್ಟೇಟ್ ಮೆಡಿಕಲ್ & ಸೇಲ್ಸ್ ರೆಪ್ರೆನ್ಟೆಂಟೀವ್ ಎಸೋಸಿಯೇಶನ್ ಉಡುಪಿ (ವೈದ್ಯಕೀಯ ಪ್ರತಿನಿಧಿಗಳ ಸಂಘ) ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ 23 ನೇ ವರ್ಷದ ವೈದ್ಯರ ದಿನಾಚರಣೆ, ಅಭಿನಂದನಾ ಸಮಾರಂಭ ಉಡುಪಿ ಪುರಭವನದಲ್ಲಿ ಜುಲೈ 5 ರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಹುಟ್ಟುವಾಗ ಯಾರು ಕೂಡ ಅರ್ಜಿ ಹಾಕಿ ಹುಟ್ಟಿರುವುದಿಲ್ಲ ಆದರೆ ಈ ಅಪೂರ್ವವಾದ ಅವಕಾಶವನ್ನು ಬಳಸಿ ನಮ್ಮ ಜನ್ಮವನ್ನು ಸಾರ್ಥಕಗೊಳಿಸಬೇಕು ಪರೋಪಕಾರ ಮತ್ತು ಸಹಜೀವನ ನಮ್ಮ ತತ್ವವಾಗಬೇಕು ಎಂದರು. ವೈದ್ಯರು ತಮ್ಮ ಅಪೂರ್ವವಾದ ಸೇವೆಯನ್ನು ಸಮಾಜಕ್ಕೆ ನಿರಂತರವಾಗಿ ನೀಡಿರುವ ಕಾರಣ ಇಂದು ಸಮಾಜದ ಆರೋಗ್ಯ ಸರಿಯಾದ ರೀತಿಯಲ್ಲಿ ಇದೆ. ವೈದ್ಯರ ಈ ಸೇವೆಯನ್ನು ಗುರುತಿಸುವ ಕಾರ್ಯ ನಿರಂತರವಾಗಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್ ವಸಿದ್ದರು.
ಮುಖ್ಯ ಅತಿಥಿ ಭಾರತೀಯ ವೈದ್ಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಸುರೇಶ್ ಶೆಣೈ ಮಾತನಾಡಿ ವೈದ್ಯಕೀಯ ಪ್ರತಿನಿಧಿಗಳು ಬಹಳಷ್ಟು ಜನರು ತಮ್ಮ ಉದ್ಯೋಗದೊಂದಿಗೆ ಸಮಾಜಕ್ಕೆ ಅನೇಕ ರೀತಿಯ ಕೊಡುಗೆಗಳನ್ನು ನೀಡುತ್ತಿದ್ದಾರೆ. ಮುಖ್ಯವಾಗಿ ಅನೇಕ ಆರೋಗ್ಯ ಶಿಬಿರಗಳಿಗೆ ಔಷಧಗಳನ್ನು ನೀಡಿತ್ತಿರುವುದು ಶ್ಲಾಘನೀಯ ಎಂದರು.

ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಮಾತನಾಡಿ, ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಬಿಸಿ ರಾಯ್ ಅವರ ಜೀವನವೇ ಎಲ್ಲರಿಗೂ ಆದರ್ಶ ಅವರು ಇಡೀ ತಮ್ಮ ಜೀವನವನ್ನು ವೈದ್ಯರಾಗಿ ಮತ್ತು ಉತ್ತಮ ಜನಪ್ರತಿನಿಧಿಯಾಗಿ ಸಮಾಜಕ್ಕೆ ವ್ಯಯಿಸಿರುವುದು ಎಲ್ಲರಿಗೂ ಆದರ್ಶವಾಗಿದೆ ಎಂದರು.

ವೇದಿಕೆಯಲ್ಲಿ ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜಶ್ವರ್ ರಾ,ವ್ ಮಾಜಿ ಅಧ್ಯಕ್ಷ ಮತ್ತು ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಗೌರವ ಸಲಹೆಗಾರ ಮಧುಸೂಧನ್ ಹೇರೂರು, ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕಾರಂತ್ ಮುಂತಾದವರು ಉಪಸ್ಥಿತರಿದ್ದರು. ಹಿರಿಯ ವೈದ್ಯರುಗಳಾದ ಮಣಿಪಾಲ ಕೆಎಂಸಿ ಸ್ತ್ರೀರೋಗ ತಜ್ಞ ಡಾ ಶ್ರೀಪಾದ ಹೆಬ್ಬಾರ್, ತೆಕ್ಕಟ್ಟೆಯ ವೈದ್ಯರಾದ ಡಾ. ಕೃಷ್ಣಯ್ಯ ಶೆಟ್ಟಿ, ಹಿರಿಯಡ್ಕ ಕಾಮತ್ ಕ್ಲಿನಿಕ್ ನ ಡಾ. ಸುಧಾ ಕಾಮತ್, ಕುಂದಾಪುರ ಸರ್ಕಾರಿ ಆಸ್ಪತ್ರೆಯ ಡಾ. ನಾಗೇಶ್ ಅವರನ್ನು ಅಪೂರ್ವವಾದ ವೈದ್ಯಕೀಯ ಸೇವೆಗಾಗಿ ಸನ್ಮಾನಿಸಲಾಯಿತು. ರಾಜು ಪಿ ಕರಾವಳಿ, ವಿಜೇತ, ಅಂಬಿಕಾ, ಅನಂತಕೃಷ್ಣ ಹೊಳ್ಳ, ರಾಘವೇಂದ್ರ ಪ್ರಭು ಕರ್ವಾಲು, ವಿವೇಕಾನಂದ ಕಾಮತ್ ಪರಿಚಯಿಸಿದರು. ಮಧುಸೂಧನ್ ಹೇರೂರು ಪ್ರಸ್ತಾವಿಕವಾಗಿ ಮಾತನಾಡಿದರು. ಸುಬ್ರಹ್ಮಣ್ಯ ಆಚಾರ್ಯ ನಿರೂಪಿಸಿದರು. ಪ್ರಸನ್ನ ಕಾರಂತ್ ವಂದಿಸಿದರು. ಜಯಂಟ್ಸ್ ಸದಸ್ಯರನ್ನು ಮತ್ತು ವೈದ್ಯರುಗಳನ್ನು ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!