Friday, July 24, 2026
Friday, July 24, 2026

ಜ್ಞಾನಸುಧಾ: ವೃತ್ತಿಪರ ಮಾರ್ಗದರ್ಶನ

ಜ್ಞಾನಸುಧಾ: ವೃತ್ತಿಪರ ಮಾರ್ಗದರ್ಶನ

Date:

ಕಾರ್ಕಳ, ಜು.7: ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿ.ಕಾಂ ಪದವಿಯ ಜೊತೆಗೆ ಸಿ.ಎ ಮಾಡಬಹುದು. ವಾಣಿಜ್ಯಶಾಸ್ತ್ರದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅತ್ಯಂತ ಪ್ರತಿಷ್ಠಿತ ಮತ್ತು ಹೆಚ್ಚು ಪ್ರತಿಫಲ ನೀಡುವ ವೃತ್ತಿ ಆಯ್ಕೆಗಳಲ್ಲಿ ಚಾರ್ಟಡ್ ಅಕೌಂಟೆಂಟ್, ಕಂಪೆನಿ ಸೆಕ್ರೆಟರಿ, ಎ.ಸಿ.ಸಿ.ಎ, ಸಿ.ಐ,ಎಂ,ಎ, ಎನ್.ಸಿ.ಎಫ್.ಎಂ, ಸಿ.ಎಂ.ಎ ಈ ಎಲ್ಲಾ ಕೋರ್ಸುಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಉಷಾ ರಾವ್ ಯು., ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಮಿಥುನ್ ಯು., ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಮಿತ್ರಾ, ಉಪನ್ಯಾಸಕರಾದ ಶೈಲೇಶ್ ಶೆಟ್ಟಿ ಮತ್ತು ಮಂಜುನಾಥ್ ಮುದೂರು ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಸಾಹಿತ್ಯ ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!