ಸಂತೆಕಟ್ಟೆ, ಜು.7: ಉಡುಪಿ ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹುವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ ರೂ.10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮೀನು ಮಾರುಕಟ್ಟೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.
ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಜಯಂತಿ ಪೂಜಾರಿ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಬೇಬಿ ಸಾಲ್ಯಾನ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಸಹಕಾರಿ ಸಂಘದ ನಿರ್ದೇಶಕರಾದ ಸುರೇಶ್ ಕುಂದರ್, ನಾರಾಯಣ, ಪ್ರಶಾಂತ್ ಕಾಂಚನ್ ಬೆಂಗ್ರೆ, ಉಮೇಶ್ ಶೆಟ್ಟಿ, ಸತೀಶ್ ನಾಯ್ಕ್, ಚಿನ್ಮಯ ಮೂರ್ತಿ, ಪ್ರಸಾದ್ ರಾವ್, ಅಜಿತ್ ಕೊಡವೂರು, ಕೃಷ್ಣ ಶೆಟ್ಟಿ, ದಿನೇಶ್ ಪೈ, ರುಡಾಲ್ಫ್ ಹಾಗೂ ಒಣ ಮೀನು ಮಾರಾಟಗಾರ ಮಹಿಳೆಯರು ಉಪಸ್ಥಿತರಿದ್ದರು.




By
ForthFocus™