Saturday, January 17, 2026
Saturday, January 17, 2026

ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿಗೆ ಸೂಚನೆ

ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿಗೆ ಸೂಚನೆ

Date:

ಉಡುಪಿ, ಜು.9: ಉಡುಪಿ ನಗರಸಭಾ 35 ವಾರ್ಡುಗಳಲ್ಲಿನ ಎಲ್ಲಾ ಸಾರ್ವಜನಿಕರು ತಮ್ಮ ಮನೆ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯಗಳು, ತೆಂಗಿನ ಮಡಲು, ಗಿಡಗಂಟಿ, ಗಾರ್ಡನ್ ತ್ಯಾಜ್ಯ ಇತ್ಯಾದಿಗಳನ್ನು ರಸ್ತೆ ಬದಿಗೆ ಹಾಗೂ ಮಳೆ ನೀರು ಹರಿಯುವ ತೋಡಿಗೆ ಅಥವಾ ಚರಂಡಿಗೆ ಎಸೆಯುತ್ತಿರುವುದು ಕಂಡು ಬಂದಿದ್ದು, ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲು ಹಾಗೂ ರಸ್ತೆ ಬದಿಗೆ ಹಾಕಿರುವ ತೆಂಗಿನ ಮಡಿಲಿನಿಂದಾಗಿ ಘನತ್ಯಾಜ್ಯ ವಿಲೇವಾರಿಗೆ ತೊಂದರೆ ಉಂಟಾಗಿರುತ್ತದೆ. ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ತೆಂಗಿನ ಮಡಲು ಮತ್ತು ಇತರೆ ತ್ಯಾಜ್ಯವನ್ನು ಎಸೆಯುತ್ತಿರುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಮೇಲ್ಕಂಡ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!