Sunday, October 25, 2026
Sunday, October 25, 2026

ಉಪ್ಪುಂದ: ವಿವಿಧ ಘಟಕಗಳ ಚಟುವಟಿಕೆಗಳ ಉದ್ಘಾಟನೆ

ಉಪ್ಪುಂದ: ವಿವಿಧ ಘಟಕಗಳ ಚಟುವಟಿಕೆಗಳ ಉದ್ಘಾಟನೆ

Date:

ಉಪ್ಪುಂದ, ಜು.11: ಸರಕಾರಿ ಪದವಿಪೂರ್ವ ಕಾಲೇಜು ನಾವಂದ ಇಕೋ ಕ್ಲಬ್, ಸ್ಪೋರ್ಟ್ಸ್ ಕ್ಲಬ್, ಸಾಂಸ್ಕತಿಕ ಸಂಘ, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ರಾಮಕೃಷ್ಣ ನರ್ಸಿಂಗ್ ಹೋಮ್ ಕುಂದಾಪುರ ಇಲ್ಲಿನ ಪ್ರಧಾನ ಸಲಹೆಗಾರರು ಮತ್ತು ಸಮಗ್ರ ಚರ್ಮರೋಗ ತಜ್ಞರಾದ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಅಜಿತ್ ಎಂ ಮಕ್ಕಳಿಗೆ ಪ್ರೇರಣಾತ್ಮಕ ಉಪನ್ಯಾಸವನ್ನು ನೀಡಿದರು.

ಭೌತಶಾಸ್ತ್ರ ಉಪನ್ಯಾಸಕರಾದ ಗಾಯತ್ರಿ ಭಟ್ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇತಿಹಾಸ ಉಪನ್ಯಾಸಕರಾದ ಗಣೇಶ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷೆ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ಲಗಳೂರು, ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ, ಅರ್ಥಶಾಸ್ತ್ರ ಉಪನ್ಯಾಸಕರಾದ ನೇತ್ರಾವತಿ, ಕನ್ನಡ ಉಪನ್ಯಾಸಕರಾದ ನಾಗೇಶ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಉಮೇಶ್ ಕುಂದರ್ ಮತ್ತು ಲೋಕೇಶ್, ವೈದ್ಯಕೀಯ ಪ್ರತಿನಿಧಿ ಸುಕುಮಾರ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.25: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ...

ನ.1: ಕಾಪು ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾಪು, ಅ.25: ಕಾಪು ಪರಿಸರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಶ್ರೀ...
error: Content is protected !!