Thursday, October 22, 2026
Thursday, October 22, 2026

ಉಡುಪಿ ನಗರಸಭೆ: ಟೈಲರಿಂಗ್ ಯಂತ್ರ ವಿತರಣೆ

ಉಡುಪಿ ನಗರಸಭೆ: ಟೈಲರಿಂಗ್ ಯಂತ್ರ ವಿತರಣೆ

Date:

ಉಡುಪಿ, ಜು.12: ಉಡುಪಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ. 7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ ಫಲಾನುಭವಿಗಳಿಗೆ ಮಂಜೂರಾದ ಟೈಲರಿಂಗ್ ಯಂತ್ರಗಳನ್ನು ಶಾಸಕರಾದ ಯಶ್ಪಾಲ್ ಸುವರ್ಣ ವಿತರಿಸಿದರು.

ಉಡುಪಿ ನಗರ ಸಭೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ನಗರಸಭೆ ವತಿಯಿಂದ 76 ಫಲಾನುಭವಿಗಳಿಗೆ ವಿತರಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ಅರ್ಹ ವ್ಯಕ್ತಿಗಳಿಗೆ ಟೈಲರಿಂಗ್ ವೃತ್ತಿ ನಡೆಸಿ ಸ್ವಾವಲಂಬಿ ಬದುಕು ರೂಪಿಸಲು ಸಹಕಾರ ನೀಡಿದಂತಾಗಿದ್ದು, ಮುಂದಿನ ದಿನಗಳಲ್ಲಿಯೂ ಸ್ವ ಉದ್ಯೋಗ ನಡೆಸಲು ಮುಂದಾಗುವ ವ್ಯಕ್ತಿಗಳಿಗೆ ನಗರಸಭೆ ಮೂಲಕ ಸದಾ ಸಹಕಾರ ನೀಡಲು ವಿಶೇಷ ಆದ್ಯತೆ ವಹಿಸುವುದಾಗಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
error: Content is protected !!