Sunday, September 27, 2026
Sunday, September 27, 2026

ವಿದ್ಯಾರ್ಥಿ ಜೀವನವನ್ನು ಸಾರ್ಥಕ ಮಾಡಿಕೊಂಡವನೇ ಸಾಧಕ: ಎ.ಎಸ್.ಪಿ ಸುಧಾಕರ್ ನಾಯಕ್

ವಿದ್ಯಾರ್ಥಿ ಜೀವನವನ್ನು ಸಾರ್ಥಕ ಮಾಡಿಕೊಂಡವನೇ ಸಾಧಕ: ಎ.ಎಸ್.ಪಿ ಸುಧಾಕರ್ ನಾಯಕ್

Date:

ಉಡುಪಿ, ಜು.14: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಶ್ರದ್ಧೆ ಮತ್ತು ಚೆನ್ನಾಗಿ ಓದುವ ಹವ್ಯಾಸಗಳನ್ನು ಬೆಳೆಸಿಕೊಂಡರೆ ಭವಿಷ್ಯದ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ. ವಿದ್ಯಾರ್ತಿ ಜೀವನವನ್ನು ಸಾರ್ಥಕ ಮಾಡಿಕೊಂಡವರೇ ನಿಜವಾದ ಸಾಧಕರು ಆಗುತ್ತಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಸರಕಾರಿ ಸಂಯುಕ್ತ ಪ್ರೌಡಶಾಲೆಯಲ್ಲಿ ಉಡುಪಿ ಪೊಲೀಸ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ
ಶಾಲಾ ಬ್ಯಾಗ್, ಡ್ರಾಯಿಂಗ್ ಕಿಟ್ ಹಾಗೂ ನೀರಿನ ಬಾಟೆಲ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ತಮ್ಮ ಪೋಷಕರಿಗೆ, ಗುರುಹಿರಿಯರಿಗೆ ಒಳ್ಳೆಯ ಹೆಸರನ್ನು ತಂದುಕೊಡುವ ಜೊತೆಗೆ ಸಮಾಜದಲ್ಲಿ ಉತ್ತಮ ಸೇವೆಯನ್ನು ಮಾಡುವುದರೊಂದಿಗೆ ಜೀವನದಲ್ಲಿ ಸಾರ್ಥಕತೆಯನ್ನು ಕಾಣಬೇಕು ಎಂದರು. ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮಾತನಾಡಿ, ಶಿಕ್ಷಣಕ್ಕಾಗಿ ವಿವಿಧೆಡೆಯಿಂದ ಆಗಮಿಸಿದ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಶಿಕ್ಷಣದ ಹಾದಿ ಹಿಡಿಯುತ್ತಾರೆ. ಗುರಿ ಸಾಧಿಸುವವರೆಗೆ ಸತತ ಅಧ್ಯಯನ ಮಾಡಬೇಕು. ಬದುಕುವ ಕಲೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕಲಿಕೆಯ ಜೊತೆಗೆ ಉಳಿಕೆಯ ಕಲೆಯನ್ನು ಅಭ್ಯಾಸ ಮಾಡಿಕೊಂಡಾಗ ಬದುಕು ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಡ್ರಾಯಿಂಗ್ ಕಿಟ್ ಹಾಗೂ ನೀರಿನ ಬಾಟೆಲ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಡಿವೈಎಸ್‌ಪಿ ಪ್ರಭು ಡಿ.ಟಿ., ನಗರ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ, ವಿವಿಧ ಠಾಣೆಯ ಪೊಲೀಸ್ ಉಪನಿರೀಕ್ಷಕರುಗಳು, ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಉಷಾಕಿರಣ ಸ್ವಾಗತಿಸಿ, ಶಿಕ್ಷಕ ರವೀಂದ್ರ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!