Tuesday, January 20, 2026
Tuesday, January 20, 2026

ಮೃತ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವರಿಂದ ಪರಿಹಾರಧನ ವಿತರಣೆ

ಮೃತ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವರಿಂದ ಪರಿಹಾರಧನ ವಿತರಣೆ

Date:

ಉಡುಪಿ, ಜು.15: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ರವರ ಮನೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ರವರು ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀನು ಹಿಡಿಯುವ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಕಾಲು ಜಾರಿ ಸಮುದ್ರದಲ್ಲಿ ಬಿದ್ದು, ಅಸ್ವಸ್ಥರಾಗಿದ್ದ ನೀಲಾಧರ ಜಿ ತಿಂಗಳಾಯ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಸಹ ಉಳಿಸಿಕೊಳ್ಳಲಾಗಲಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೃತ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಸಹಕಾರ ನೀಡಿದ್ದಾರೆ.

ಭಟ್ಕಳ, ಮುರ್ಡೇಶ್ವರ ಸೇರಿದಂತೆ ಉಡುಪಿಯಲ್ಲಿಯೂ ಸಹ ಇಂತಹ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಅತೀವ ನೋವು ತಂದಿದೆ ಎಂದ ಅವರು, ಮೃತ ಮೀನುಗಾರರ ಕುಟುಂಬಕ್ಕೆ ಸರಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಎಂದರು. 6 ಲಕ್ಷ ರೂ. ಇದ್ದ ಪರಿಹಾರದ ಹಣವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇಂದು ಪರಿಹಾರದ ಹಣವನ್ನು ಕುಟುಂಬದವರಿಗೆ ವಿತರಿಸಿದ್ದೇವೆ ಹಾಗೂ ಪ್ರಪ್ರಥಮಬಾರಿಗೆ ದೋಣಿ, ಇಂಜಿನ್, ಬಲೆಯ ಖರೀದಿಗೆ ಸಹ 5 ಲಕ್ಷ ರೂ. ನೀಡಲಾಗಿದೆ. ಕರಾವಳಿ ಭಾಗದಲ್ಲಿ ಇಂತಹ ದುರಂತ ಮತ್ತೆ ಮರುಕಳಿಸದಂತೆ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಹವಾಮಾನ ಇಲಾಖೆಯಿಂದ ನೀಡಲಾಗುವ ಮುನ್ಸೂಚನೆಗಳನ್ನು ಪಾಲಿಸಬೇಕು ಎಂದ ಅವರು, ಸಮುದ್ರ ಪ್ರಕ್ಷಬ್ಧವಾಗಿರುವುದರಿಂದ ಕರಾವಳಿ ಭಾಗದ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿದರು.

ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!