Saturday, February 7, 2026
Saturday, February 7, 2026

ಸಹಕಾರ ತತ್ವದಡಿ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ: ಯಶ್ಪಾಲ್ ಸುವರ್ಣ

ಸಹಕಾರ ತತ್ವದಡಿ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ: ಯಶ್ಪಾಲ್ ಸುವರ್ಣ

Date:

ಮಲ್ಪೆ, ಜು.18: ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘ ನಿ. ಮಲ್ಪೆ ಇದರ ವತಿಯಿಂದ ಶ್ರೀ ಜ್ಞಾನಜ್ಯೋತಿ ಭಜನಾ ಮಂದಿರ ಮಲ್ಪೆ ಇದರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪದ ಆಶಯದೊಂದಿಗೆ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಲ್ಪೆ ಮೀನುಗಾರ ಮಹಿಳೆಯರ ಸಹಕಾರಿ ಸಂಘ ಸಹಕಾರಿ ತತ್ವದಡಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಜೊತೆ ಜೊತೆಗೆ ವನ ಮಹೋತ್ಸವದಂತಹ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅತ್ಯಂತ ಶ್ಲಾಘನೀಯವಾಗಿದ್ದು, ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಮಹೋತ್ಸವ ಆಚರಣೆಯನ್ನು ಸಹಕಾರಿ ಸಂಘಗಳ ಸಹಭಾಗಿತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೀತಾ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಜ್ಞಾನಜ್ಯೋತಿ ಭಜನಾ ಮಂದಿರದ ಪಾಂಡುರಂಗ ಮಲ್ಪೆ, ಸಂಘದ ಉಪಾಧ್ಯಕ್ಷರಾದ ರಾಧಾ ಸುವರ್ಣ, ನಿರ್ದೇಶಕರಾದ ಪೂರ್ಣಿಮ ಪುತ್ರನ್, ಯೋಗಿತಾ ಸುವರ್ಣ, ಕಾರ್ಯದರ್ಶಿ ಮಂಗಳ ತಿಲಕ್ ಹಾಗೂ ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!