Friday, March 20, 2026
Friday, March 20, 2026

ಜ್ಞಾನಸುಧಾ: ಉಡುಪಿ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕರ ಕಾರ್ಯಾಗಾರ

ಜ್ಞಾನಸುಧಾ: ಉಡುಪಿ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕರ ಕಾರ್ಯಾಗಾರ

Date:

ಉಡುಪಿ, ಜು.21: ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ, ಪ್ರಾಮಾಣಿಕತೆ, ನೈತಿಕತೆಗಳನ್ನು ಬೆಳೆಸುವ ಉಪನ್ಯಾಸಕರಾಗಿರಿ. ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರಿ ಎಂದು ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಾದ ಮಾರುತಿ ಹೇಳಿದರು. ಇವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ನಾಗಬನ ಕ್ಯಾಂಪಸ್ ಕಡಿಯಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪ್ರಾಂಶುಪಾಲರ ಸಂಘ ಆಯೋಜಿಸಿದ ಆಂಗ್ಲ ಭಾಷಾ ವಿಷಯದ ಶೈಕ್ಷಣಿಕ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್‌ ಪ್ರಪಂಚದ ಯಾವ ಭಾಗಗಳಿಂದ ಜ್ಞಾನ ಹರಿದು ಬಂದರೂ ಅದನ್ನು ಸ್ವೀಕರಿಸಬೇಕು. ಆದರೆ ಆ ಜ್ಞಾನವನ್ನು ಸ್ವೀಕರಿಸಲು ಆಂಗ್ಲಭಾಷೆ ಬಹುಮುಖ್ಯ. ಈ ಭಾಷೆಯ ಕಲಿಕೆ ಯಶಸ್ಸಿನ ಮೊದಲ ಹೆಜ್ಜೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಮಾತನಾಡಿ, ಶೈಕ್ಷಣಿಕ ಕಾರ್ಯಾಗಾರಗಳು ಕೇವಲ ಶೈಕ್ಷಣಿಕ ವಿಷಯಕ್ಕೆ ಮೀಸಲಾಗದೆ ಅದು ಸಾಮಾಜಿಕ ಸೇವೆ, ಪ್ರತಿಭೆಗಳ ಅನಾವರಣ ಮುಂತಾದ ಕಾರ್ಯಕ್ರಮಗಳಿಗೆ ವಿಸ್ತರಿಸಬೇಕು. ಎಲ್ಲಾ ಜಿಲ್ಲೆಗಳಲ್ಲೂ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿಯಾಗಬೇಕು ಎಂದರು.

ಕಾರ್ಯಾಗಾರದಲ್ಲಿ ಮಧು ಜಿ ಎಮ್., ಆಂಗ್ಲ ಭಾಷಾ ಉಪನ್ಯಾಸಕರು ಸರಕಾರಿ ಪ.ಪೂ. ಕಾಲೇಜು ಚಿಕ್ಕಮಗಳೂರು, ಓಂಕಾರಮೂರ್ತಿ ಜಿ.ಟಿ., ಆಂಗ್ಲ ಭಾಷಾ ಉಪನ್ಯಾಸಕರು ಸರಕಾರಿ ಪ.ಪೂ. ಕಾಲೇಜು ತರಿಕೆರೆ ಚಿಕ್ಕಮಗಳೂರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿಗಾರ್ ಸ್ವಾಗತಿಸಿ, ಕಾರ್ಯದರ್ಶಿಗಳಾದ ಗಂಗಾಧರ್ ವಿ ಎ ವಂದಿಸಿದರು. ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಕೀರ್ತಿ ಹರೀಶ್ ನಿರೂಪಿಸಿದರು.

ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ನೂತನ ಅಧ್ಯಕ್ಷರಾಗಿ ಶಾರದಾ ಹೊಳ್ಳ, ಉಪಾಧ್ಯಕ್ಷರಾಗಿ ಥೋಮಸ್, ಕಾರ್ಯದರ್ಶಿಗಳಾಗಿ ಜೋತ್ಸ್ನಾ ಪೈ, ಸಹ ಕಾರ್ಯದರ್ಶಿಯಾಗಿ ಸತ್ಯನಾರಾಯಣ, ಖಜಾಂಚಿಯಾಗಿ ರಾಜೇಶ್, ಸಹಖಜಾಂಚಿಯಾಗಿ ಶಮಿತಾ, ಸದಸ್ಯರಾಗಿ ಅನುಪಮಾ, ಜಿನ್ಸಿ, ಸೌದಾಮಿನಿ, ಪ್ರಕಾಶ್, ಸೌರಭ್ ಆಯ್ಕೆಯಾದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ...

ರಥಬೀದಿ ಕಾಲೇಜು: ಮಹಿಳಾ ದಿನಾಚರಣೆ

ಮಂಗಳೂರು, ಮಾ.20: ಸಮಾಜದ ಕಟ್ಟುಪಾಡುಗಳ ಮಧ್ಯೆಯೇ ಛಲದಿಂದ ಮುನ್ನಡೆದು ಗುರಿ ಸಾಧಿಸಿದ...
error: Content is protected !!