ಕಾಪು, ಜು.21: ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯಲ್ಲಿ ಅಧಿಕಾರಿಗಳ ಜೊತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದರು.
ಕಾಪು ತಾಲೂಕಿನ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯಲ್ಲಿ ಸರಕಾರಿ ನಿವೇಶನವನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಮತ್ತು ಅರ್ಹ ಫಲಾನುಭವಿಗಳಿಗೆ ನಿವೇಶನವನ್ನು ನೀಡುವ ಬಗ್ಗೆ ಚರ್ಚಿಸಿ 94 ಸಿ ಮತ್ತು 94 ಸಿ.ಸಿ ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಶೀಘ್ರವೇ ಹಕ್ಕುಪತ್ರವನ್ನು ಮಂಜೂರು ಮಾಡುವಂತೆ ಹಾಗೂ 53/57 ರಲ್ಲಿ ಈಗಾಗಲೇ ಅಕ್ರಮ ಸಕ್ರಮ ಸಮಿತಿಯಲ್ಲಿ ಮಂಡಿಸಿ ಪುರಸ್ಕೃತಗೊಂಡ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗೆ ಶೀಘ್ರವೇ ಜಮೀನು ಮಂಜೂರು ಮಾಡುವಂತೆ ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಕಾಪು ತಹಶೀಲ್ದಾರರಾದ ಪ್ರತೀಭಾ ಆರ್., ಕಂದಾಯ ನಿರೀಕ್ಷಕರಾದ ಶಬೀರ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™