Monday, April 20, 2026
Monday, April 20, 2026

ಪೋಷಕರ ಜಾಗೃತಿ ಮಕ್ಕಳ ಅಭಿವೃದ್ಧಿಗೆ ಮುನ್ನುಡಿ: ಚಿಟ್ಟೆ ರಾಜಗೋಪಾಲ ಹೆಗ್ಡೆ

ಪೋಷಕರ ಜಾಗೃತಿ ಮಕ್ಕಳ ಅಭಿವೃದ್ಧಿಗೆ ಮುನ್ನುಡಿ: ಚಿಟ್ಟೆ ರಾಜಗೋಪಾಲ ಹೆಗ್ಡೆ

Date:

ಕುಂದಾಪುರ, ಜು.26: ಶಂಕರನಾರಾಯಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಹಳ ದೊಡ್ಡ ಇತಿಹಾಸವಿದೆ. 1991ರಲ್ಲಿ ಅಂದಿನ ಶಾಸಕರಾದ ಜಿ.ಎಸ್ ಆಚಾರ್ ಅವರ ಪರಿಶ್ರಮದ ಫಲವಾಗಿ ಗ್ರಾಮೀಣ ಪ್ರದೇಶವಾದ ಶಂಕರನಾರಾಯಣದಲ್ಲಿ ಕಾಲೇಜು ಸ್ಥಾಪನೆಯಾಯಿತು. ಇಂದು ಈ ಕಾಲೇಜು ಸಮೃದ್ಧವಾಗಿ ಬೆಳೆದಿದ್ದು ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಉನ್ನತ ಶೇಯಾಂಕ ಪಡೆದಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಈ ಕಾಲೇಜಿನಲ್ಲಿ ಅಧ್ಯಯನ ಮಾಡಿದ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನಮಾನವನ್ನು ಪಡೆದು ಹೆತ್ತವರಿಗೆ ಮತ್ತು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಪ್ರಮುಖ. ಆಧುನಿಕ ಮಾಧ್ಯಮ ಪ್ರಪಂಚ ಮಕ್ಕಳ ಮನಸ್ಸು ಮತ್ತು ಏಕಾಗ್ರತೆಗೆ ಭಂಗ ತರುವಂತಿದೆ. ಆದ್ದರಿಂದ ಪೋಷಕರು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದು ಸಾಮಾಜಿಕ ಹೋರಾಟಗಾರ ಮತ್ತು ಶಂಕರನಾರಾಯಣ ತಾಲೂಕು ರಚನಾ ಸಮಿತಿಯ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪೋಷಕರ ಸಂಘದ ಆಶ್ರಯದಲ್ಲಿ ನಡೆದ ಪೋಷಕರ ಸಭೆ ಮತ್ತು ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಶಿಸ್ತು, ಶಿಕ್ಷಣ, ಉತ್ತಮ ನಡತೆಯಿಂದ ವಿದ್ಯಾರ್ಥಿ ವ್ಯಕ್ತಿತ್ವ ಮತ್ತು ಭವಿಷ್ಯವು ರೂಪಗೊಳ್ಳಲು ಸಾಧ್ಯವೆಂದು ಹೇಳಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಗಿರೀಶ್ ಶಾನುಭೋಗ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಕಾಲೇಜಿನ ವಿಶೇಷತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿನಿ ಪ್ರಜ್ಞಾ ಪ್ರಾರ್ಥಿಸಿದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ಡಾ.ವಸಂತ ಜಿ. ಸ್ವಾಗತಿಸಿ, ಡಾ. ಗಂಗಾಧರ ಆರ್.ಎಚ್. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ...
error: Content is protected !!