Thursday, October 1, 2026
Thursday, October 1, 2026

ಪತ್ರಿಕೋದ್ಯಮ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಿ: ಲಕ್ಷ್ಮೀ ಮಚ್ಚಿನ

ಪತ್ರಿಕೋದ್ಯಮ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಿ: ಲಕ್ಷ್ಮೀ ಮಚ್ಚಿನ

Date:

ಕೋಟ, ಜು.26: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳನ್ನು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬನ್ನಿ ಎಂದು ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ಹೇಳಿದರು. ಅವರು ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ಮಾಡಿ, ಒಳಿತು-ಕೆಡುಕುಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದರು. ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬ್ರಹ್ಮಾವರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದಯು.ಎಸ್. ಶೆಣೈಅವರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಯ್ಬ್ರಕಟ್ಟೆ, ಪ್ರವೀಣ್ ಕುಮಾರ್, ಇಬ್ರಾಹಿಂ ಸಾಹೇಬ್, ಉಪಸ್ಥಿತರಿದ್ದರು. ಸಂಘದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿ, ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ.ವೈದ್ಯ ಸಮ್ಮಾನಿತರನ್ನು ಪರಿಚಯಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಹರೀಶ್ ಕಿರಣ್ ತುಂಗ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!