Monday, September 28, 2026
Monday, September 28, 2026

ಭಾರತವೆನ್ನುವುದು ಪುಣ್ಯಕ್ಷೇತ್ರ: ಅಕ್ಷಯ ಗೋಖಲೆ

ಭಾರತವೆನ್ನುವುದು ಪುಣ್ಯಕ್ಷೇತ್ರ: ಅಕ್ಷಯ ಗೋಖಲೆ

Date:

ಗಣಿತನಗರ, ಜು.27: ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ‘ಬಹುರತ್ನ ಪ್ರಸವೀ ಭಾರತೀ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ನಮ್ಮ ಬದುಕು ಸಮಾಜಕ್ಕೆ ಸಮರ್ಪಿತವಾಗಿರಲಿ. ಒಳ್ಳೆಯ ಆದರ್ಶದ ಅಡಿಗಲ್ಲಿನ ಮೇಲೆ ನಮ್ಮ ಭವಿಷ್ಯವನ್ನು ನಾವು ಕಟ್ಟಿಕೊಳ್ಳಬೇಕು. ಭಾರತವನ್ನು ಬೆಳಗಿಸುವಂತಹ ಮುತ್ತು ರತ್ನಗಳು ನಾವಾಗಬೇಕು. ಅದ್ಭುತ ಸೈನಿಕ ಪರಂಪರೆ ನಮ್ಮದು. ನಮ್ಮ ಸೈನಿಕರೇ ನಮಗೆ ಸ್ಫೂರ್ತಿ ಎಂದು ನುಡಿಯುತ್ತಾ, ಕಾರ್ಗಿಲ್ ವಿಜಯದಲ್ಲಿ ಬಲಿದಾನಗೈದ ವೀರ ಯೋಧರ ಯಶೋಗಾಥೆಯನ್ನು ತೆರೆದಿಟ್ಟರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ ಮತ್ತು ಉಷಾ ರಾವ್ ಯು, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಮುಖ್ಯಸ್ಥ ಸಂದೀಪಾ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!