Monday, July 27, 2026
Monday, July 27, 2026

ಜ್ಞಾನಸುಧಾ: ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

ಜ್ಞಾನಸುಧಾ: ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

Date:

ಗಣಿತನಗರ, ಆ.2: ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು. ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಸಹಯೋಜನಾಧಿಕಾರಿ ಪ್ರಸಾದ್ ಆಚಾರ್ಯ ಎಚ್., ಘಟಕದ ವಿದ್ಯಾರ್ಥಿ ನಾಯಕರಾದ ಭವಿಷ್ ಎಸ್ ಶೆಟ್ಟಿ ಹಾಗೂ ಸೃಷ್ಟಿ ಶೆಟ್ಟಿ ರೆಂಜಾಳ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು., ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಮಿತ್ರಾ, ಸಂಖ್ಯಾಶಾಸ್ತ್ರ ಉಪನ್ಯಾಸಕ ಮಂಜುನಾಥ್ ಮುದೂರು ಉಪಸ್ಥಿತರಿದ್ದರು.

ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಶೈಲೇಶ್ ಶೆಟ್ಟಿ ಬೈಲೂರು ಸ್ವಾಗತಿಸಿ, ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!